ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕೋರ್ ಕಮಿಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಎರಡೂ ಸಮಿತಿಗಳನ್ನು ಪುನರ್ ರಚಿಸಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ತಿಳಿಸದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ರವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ನನ್ನನ್ನು
ನೇಮಕ ಮಾಡಿ ಆದೇಶ ಪತ್ರ ನೀಡಿದ್ದರು. ಆ ಬಳಿಕ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಎಲ್ಲ ಗ್ರಾಮಗಳಿಗೆ ಪ್ರಾತಿನಿದ್ಯ ಇರುವಂತೆ ವಿಸ್ತೃತವಾಗಿ ರಚಿಸಿದ್ದೆ. ಅಲ್ಲದೇ ತಾಲೂಕಿನ ಪ್ರಮುಖರನ್ನೊಳಗೊಂಡ ಕೋರ್ ಕಮಿಟಿಯನ್ನು ರಚಿಸಿ ಪಕ್ಷದ ಚಟುವಟಿಕೆಗಳನ್ನು ನಡೆಸುಕೊಂಡು ಬಂದಿದ್ದೇನೆ.ಈ ಎರಡೂ ಸಮಿತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸುತ್ತಿದ್ದೇನೆ. ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕೋರ್ ಕಮಿಟಿಯನ್ನು ಶೀಘ್ರವೇ ಪುನರ್ ರಚಿಸಲಿದ್ದೇವೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.