ಸುಳ್ಯ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾ ಕಚೇರಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕು ಘಟಕದ ವತಿಯಿಂದ ರಕ್ತದಾನ ಶಿಬಿರ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ
ಮಾಜಿ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ ರಕ್ತದಾನ ಶಿಬಿರ ಉದ್ಘಾಟಿಸಿದರು. ರೆಡ್ ಕ್ರಾಸ್ ಸುಳ್ಯ ಘಟಕದ ಸಭಾಪತಿ ಪಿ.ಬಿ.ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು, ವಲಯಾಧ್ಯಕ್ಷ ಎಂ.ವೆಂಕಪ್ಪ ಗೌಡ, ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ರೆಡ್ ಕ್ರಾಸ್ ಜಿಲ್ಲಾ ಪ್ರತಿನಿಧಿ ಸಿಎ ಗಣೇಶ್ ಭಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಪ್ರಮುಖರಾದ ಬೂಡು ರಾಧಾಕೃಷ್ಣ ರೈ, ಪದ್ಮನಾಭ ಶೆಟ್ಟಿ, ಸುಬೋದ್ ಶೆಟ್ಟಿ ಮೇನಾಲ, ಭಾಸ್ಕರ್ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು. ನೂರಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ ವಂದಿಸಿದರು.









