ಸುಳ್ಯ:ಕೆವಿಜಿ ದಂತ ಮಹಾವಿದ್ಯಾಲಯ, ಕೆವಿಜಿ ಇಂಜಿನಿಯರಿಂಗ್ ಕಾಲೇಜು, ಕೆವಿಜಿ ಪಾಲಿಟೆಕ್ನಿಕ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸುಳ್ಯ ಘಟಕದ ಅಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಕೆವಿಜಿ ದಂತ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಜೂ.14 ರಂದು ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ದಾಖಲೆಯ
205 ಮಂದಿ ರಕ್ತದಾನ ಮಾಡಿದ್ದಾರೆ. ಕೆವಿಜಿ ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು
ಹಾಗೂ ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ಕೆವಿಜಿ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ವಿಶೇಷ ಆಸಕ್ತಿ ವಹಿಸಿ
ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು. ಶಿಬಿರದಲ್ಲಿ ಪೂರ್ತಿ ಭಾಗವಹಿಸಿದ ಅವರು ರಕ್ತದಾನಿಗಳಿಗೆ ಪ್ರೋತ್ಸಾಹ ನೀಡಿದರು. ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ರೆಡ್ಕ್ರಾಸ್ ಸಭಾಪತಿ, ರಕ್ತದಾನಿ ಪಿ.ಬಿ.ಸುಧಾಕರ ರೈ, ರೆಡ್ ಕ್ರಾಸ್ ಉಪಸಭಾಪತಿ ಕೆ.ಎಂ.ಮುಸ್ತಫ, ಕೆ, ಕೆವಿಜಿ ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮೋಕ್ಷಾ ನಾಯಕ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್ ಬಿ.ವಿ ಕೆವಿಜಿ ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಮಾಧವ ಬಿ.ಟಿ, ಡಾ.ಮನೋಜ್, ಡಾ.ಪ್ರಜ್ಞಾ ಮತ್ತಿತರರು ಸಹಕಾರ ನೀಡಿದರು.