ಸುಳ್ಯ: ಮಾನವ ಜೀವ ಉಳಿಸುವ ರಕ್ತದಾನ ಜಗತ್ತಿನ ಶ್ರೇಷ್ಠ ಕಾರ್ಯಗಳಲ್ಲಿ ಒಂದು. ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆ, ಸಮಸ್ಯೆ ಇಲ್ಲಾ. ನಿರ್ಭೀತಿಯಿಂದ ರಕ್ತದಾನದಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಎಂದು ಕೆವಿಜಿ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ.ಕರೆ ನೀಡಿದ್ದಾರೆ. ಕೆವಿಜಿ ದಂತ ಮಹಾವಿದ್ಯಾಲಯ, ಕೆವಿಜಿ ಇಂಜಿನಿಯರಿಂಗ್ ಕಾಲೇಜು, ಕೆವಿಜಿ ಪಾಲಿಟೆಕ್ನಿಕ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸುಳ್ಯ ಘಟಕದ ಅಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ
ಕೆವಿಜಿ ದಂತ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನದ ಮಹತ್ವದ ಬಗ್ಗೆ ಇಂದು ಜಾಗೃತಿ ಮೂಡಿರುವುದು ಮತ್ತು ಹೆಚ್ಚು ಮಂದಿ ರಕ್ತದಾನ ಮಾಡಲು ಮುಂದೆ ಬರುತ್ತಿರುವುದು ಉತ್ತಮ ಕಾರ್ಯ ಎಂದು ಅವರು ಹೇಳಿದರು.
ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ಮಾತನಾಡಿ’ ರಕ್ತದಾನ ಮಾಡುವುದರಿಂದ ಹಲವು ಜೀವಗಳನ್ನು ಉಳಿಸುವ ಕಾರ್ಯ ಮಾಡಬಹುದು. ರಕ್ತದಾನ ಕಾರ್ಯ ಶ್ರೇಷ್ಠ ಮತ್ತು ಮಾದರಿಯಾದ ಸೇವೆ, ಇದು ಸಮಾಜಕ್ಕೆ ಪ್ರೇರಣೆ ನೀಡುವ ಕಾರ್ಯ ಎಂದು ಹೇಳಿದರು. ರೆಡ್ಕ್ರಾಸ್ ಸಭಾಪತಿ,ರಕ್ತದಾನಿ ಪಿ.ಬಿ.ಸುಧಾಕರ ರೈ ಮಾತನಾಡಿ ರಕ್ತದಾನದ ಮಹತ್ವವನ್ನು ವಿವರಿಸಿದರು.
ರೆಡ್ ಕ್ರಾಸ್ ಉಪಸಭಾಪತಿ ಕೆ.ಎಂ.ಮುಸ್ತಫ, ಕಾರ್ಯದರ್ಶಿ ತಿಪ್ಪೇಶಪ್ಪ, ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಜಯಪ್ರಕಾಶ್, ಕೆವಿಜಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಚಿದಾನಂದ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆವಿಜಿ ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮೋಕ್ಷಾ ನಾಯಕ್ ಸ್ವಾಗತಿಸಿ, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್ ಬಿ.ವಿ ವಂದಿಸಿದರು. ಕೆವಿಜಿ ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಮಾಧವ ಬಿ.ಟಿ, ಪ್ರಸನ್ನ ಕಲ್ಲಾಜೆ, ಭವಾನಿಶಂಕರ ಅಡ್ಡಲೆ, ದಿನೇಶ್ ಮಡ್ತಿಲ ಮತ್ತಿತರರು ಉಪಸ್ಥಿತರಿದ್ದರು.