ಮಂಗಳೂರು:ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ ಜಿಲ್ಲೆ ಹಾಗೂ ಗೆಳೆಯರ ಬಳಗ ನಾರ್ಶ, ಬಾರೆಬೆಟ್ಟು ಇದರ ಜಂಟಿ ಆಶ್ರಯದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ನಾಟೆಕಲ್, ಉಳ್ಳಾಲ- ಮಂಗಳೂರು , ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಅಕ್ಷಯ ಬ್ಲಡ್ ಡೋನರ್ಸ್ ಇದರ 24 ನೇ ರಕ್ತದಾನ ಶಿಬಿರವು ಸರಕಾರಿ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿ ಯಲ್ಲಿ ನಡೆಯಿತು .
ಝಕರಿಯಾ ನಾರ್ಶ ಅಧ್ಯಕ್ಷತೆಯಲ್ಲಿ ಬಿ ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ ಪಿ ಸಿ ಸಿ ಕಾರ್ಯದರ್ಶಿ ಅಶ್ವಿನ್ ಕುಮಾರ್ ರೈ , ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್ಲು ಇದರ ಚೆಯರ್ಮೆನ್ ಮೋನು ಹಾಜಿ , ಹೈದರ್ ಪರ್ತಿಪ್ಪಾಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ತೆಕ್ಕಿಲ್ ಪ್ರತಿಷ್ಠಾನದ ಅದ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್ ಗೂನಡ್ಕ, ವಕೀಲ ಮೂಸಾ ಕುಂಞಿ ಪೈಂಬೆಚ್ಚಾಲ್, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಎಸ್ ವೈ ಎಸ್ ಸುಳ್ಯ ಸ್ವಾಂತನಾ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಭಾಗವಹಿಸಿದ್ದರು. ಗೌರವ ಡಾಕ್ಟರೇಟ್ ಪುರಸ್ಕರಾದ ಮೋನು ಹಾಜಿ ಕಣಚೂರು, ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್ ಗೂನಡ್ಕ,ಸಂಪಾಜೆ ಗ್ರಾ.ಪಂ. ಉಪಾಧ್ಯಕ್ಷ ಎಸ್ ಕೆ ಹನೀಫ್ ಮತ್ತಿತರರನ್ನು ಸನ್ಮಾನಿಸಲಾಯಿತು.









