ಸುಳ್ಯ:ವಿಶ್ವ ಹಿಂದೂ ಪರಿಷತ್, ಭಜರಂಗದಳ, ದುರ್ಗಾವಾಹಿನಿ ಸುಳ್ಯ ಪ್ರಖಂಡ, ರಕ್ತನಿಧಿ ಘಟಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆ, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆ ಇದರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ
ಶಿಬಿರವನ್ನು ಆಯೋಜಿಸಲಾಯಿತು.ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ,ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ್ ಪೈಕ,ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ, ಐಎಂಎ ಅಧ್ಯಕ್ಷೆ ಡಾ.ವೀಣಾ, ರಕ್ತ ನಿಧಿ ಘಟಕದ ಡಾ.ಶರತ್ ಕುಮಾರ್ ರಾವ್, ವಿಹಿಂಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಸಂಘಟನೆಯ ಪ್ರಮುಖರಾದ ಹರಿಪ್ರಸಾದ್ ಎಲಿಮಲೆ, ಸಂದೀಪ್ ವಳಲಂಬೆ, ಭಾನುಪ್ರಕಾಶ್ ಪೆರುಮುಂಡ, ನವೀನ್ ಎಲಿಮಲೆ ಮತ್ತಿತರರು ಉಪಸ್ಥಿತರಿದ್ದರು.105 ಮಂದಿ ರಕ್ತದಾನ ಮಾಡಿದರು.