ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ತಾಲೂಕು ಕಚೇರಿ ಸುಳ್ಯ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಇವರ ಸಹಯೋಗದಲ್ಲಿ ಮಾಹಿತಿ ಕಾರ್ಯಗಾರ ಮತ್ತು ರಕ್ತದಾನ ಶಿಬಿರ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ
ಸುಳ್ಯ ತಾಲೂಕು ಅಧ್ಯಕ್ಷರಾದ ತಹಶೀಲ್ದಾರ್ ಜಿ.ಮಂಜುನಾಥ್ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ.ಸುಧಾಕರ ರೈ, ಉಪ ಸಭಾಪತಿ ಕೆ.ಎಂ.ಮುಸ್ತಫ, ಕರ್ನಾಟಕ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿಕುಮಾರ್ ಟಿ ಮುಖ್ಯ ಅತಿಥಿಗಳಾಗಿದ್ದರು.

ಶಾಸಕಿ ಭಾಗೀರಥಿ ಮುರುಳ್ಯ ರಕ್ತದಾನ ಮಾಡಿದರು.
.ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೆಚ್.ಬಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಬಿ ಉಪಸ್ಥಿತರಿದ್ದರು..ಭಾರತೀಯ ರೆಡ್ ಕ್ರಾಸ್ ಸಭಾಪತಿ ಪಿ.ಬಿ.ಸುಧಾಕರ ರೈ ಅವರು ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು.
ಸಂಘದ ಉಪಾಧ್ಯಕ್ಷ ಡಾ.ನಿತಿನ್ ಪ್ರಭು ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಭವಾನಿ ವಂದಿಸಿದರು. ಪ್ರಮೀಳ ಕಾರ್ಯಕ್ರಮ ನಿರೂಪಿಸಿದರು.

ತಹಶೀಲ್ದಾರ್ ಜಿ.ಮಂಜುನಾಥ್ ರಕ್ತದಾನ ಮಾಡಿದರು.
ಶಾಸಕರು ಸೇರಿ 73 ಮಂದಿ ರಕ್ತದಾನ:
ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅವರು ರಕ್ತದಾನ ಮಾಡಿ ಗಮನ ಸೆಳೆದರು. ಅಧಿಕಾರಿಗಳು, ಸಂಘದ ಪದಾಧಿಕಾರಿಗಳು, ಸದಸ್ಯರು ಸೇರಿ 73 ಮಂದಿ ರಕ್ತದಾನ ಮಾಡಿದರು.










