ಸುಳ್ಯ:ಹುಟ್ಟುವಾಗ ಹೆಸರು ಇರುವುದಿಲ್ಲ ಉಸಿರು ನಿಂತ್ತಾಗ ಹೆಸರು ಉಳಿಯುತ್ತದೆ. ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಿದವರ ಭಾವಚಿತ್ರ ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಬಿಜೆಪಿ ಮುಖಂಡ, ಮಾಜಿ ಜಿ.ಪಂ. ಸದಸ್ಯ ದಿ.ನವೀನ್ ಕುಮಾರ್ ರೈ ಮೇನಾಲರು ನಿಧನರಾಗಿ ಒಂದು ವರ್ಷವಾದ
ಹಿನ್ನಲೆಯಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀಕೃಷ್ಣ ಭಜನಾ ಮಂದಿರ ಮೇನಾಲ ಇದರ ಆಶ್ರಯದಲ್ಲಿ ಅವರ ನೆನಪಿಗಾಗಿ ಮೇನಾಲದ ಅಂಬೇಡ್ಕರ್ ಭವನದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಹೆಸರು ಮತ್ತು ಉಸಿರಿನ ಮಧ್ಯೆ ಜೀವನ ಬೆಳಗುತ್ತದೆ.
ನವೀನ್ ಕುಮಾರ್ ರೈ ಸಮಾಜದ ಕಾರ್ಯಗಳ ಮೂಲಕ ಹೆಸರು ಶಾಶ್ವತವಾಗಿ ಉಳಿಯುವಂತ ಕೆಲಸ ಮಾಡಿ ಅಚ್ಚು ಮೆಚ್ಚಿನ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ ಮೊದಲಾಗಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಅಧ್ಯಕ್ಷ ಡಾ.ಮನೋಜ್ ಅಡ್ಡಂತಡ್ಕ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ನವೀನ್ ರೈಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘ ಚಾಲಕ ಚಂದ್ರಶೇಖರ ತಳೂರು, ಸುಳ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯ ಸಭಾಪತಿ ಸುಧಾಕರ ರೈ ಪಿ.ಬಿ. ಮುಖ್ಯ ಅತಿಥಿಗಳಾಗಿದ್ದರು. ನವೀನ್ ರೈಯವರ ಸಹೋದರ ನಯನ್ ಕುಮಾರ್ ರೈ ಮೇನಾಲ ವೇದಿಕೆಯಲ್ಲಿ ಇದ್ದರು. ರಾಜೇಶ್ ಶೆಟ್ಟಿ ಮೇನಾಲ ಪ್ರಾಸ್ತಾವಿಕ ಮಾತನಾಡಿದರು. ಸುಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿದರು. ಬಾಲಕೃಷ್ಣ ಮೇನಾಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು