ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ
ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.









