ಸುಳ್ಯ: ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತದಾನ ನಡೆಯುವ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಯುವ ಹಾಗೂ ಕಾನೂನು ಬಾಹಿರ ವಸ್ತುಗಳ ಸಾಗಟವನ್ನು ತಡೆಯುವ ಉದ್ದೇಶದಿಂದ
ದಕ್ಷಿಣ ಕನ್ನಡ ಜಿಲ್ಲೆಯ ಕೇರಳ ಗಡಿ ಭಾಗದಲ್ಲಿರುವ ರಾಜ್ಯ
ಪ್ರವೇಶಿಸಬಹುದಾದ 14 ಕಡೆಗಳಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
8 ಅಂತರ ರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ಕೇರಳ ರಾಜ್ಯ ಪೊಲೀಸ್ ಸಹಯೋಗದಲ್ಲಿ ಕೇರಳ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಹಾಗೂ ಅಂತಹ ಗಡಿಪ್ರದೇಶ ಹಾಗೂ ಚೆಕ್ ಪೋಸ್ಟ್ ಪ್ರದೇಶಗಳಲ್ಲಿ ಕೇರಳ ರಾಜ್ಯ ಪೊಲೀಸ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ಸೇರಿ ಜಂಟಿ ಪಟ್ರೋಲಿಂಗ್ ನಡೆಸುವ ಮೂಲಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿ, ಹೆಚ್ಚಿನ ತಪಾಸಣೆ ಕೈಗೊಳ್ಳಲಾಗಿದೆ ಎಂದು ಪೊಲೀಸ್