ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರಿನಲ್ಲಿರುವ ತೂವಲ್ ಥೀರಂ ಪ್ರವಾಸಿ ತಾಣದ ಪುರಪುಯ ನದಿಯಲ್ಲಿ ಬೋಟ್ ಮುಳುಗಿ 22 ಮಂದಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೃತರಲ್ಲಿ
7 ಮಕ್ಕಳು ಸೇರಿದ್ದಾರೆ. 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.ಬೋಟ್ನಲ್ಲಿ ಎಷ್ಟು ಮಂದಿ ಇದ್ದರು ಎಂದು ಸ್ಪಷ್ಟವಾಗಿಲ್ಲ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು,ಪೊಲೀಸ್, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು, ಮೀನುಗಾರರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯ ಹಿನ್ನಲೆಯಲ್ಲಿ ಕೇರಳದಲ್ಲಿ ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.