ಐವರ್ನಾಡು:ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ
ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯ ತಂಡ ಹಾಗೂ ಬ್ಯಾಂಕ್ ಆಫ್ ಬರೋಡಾ ತಂಡಗಳು ಸೆಮಿಫೈನಲ್ ಪ್ರವೇಶಿಸಿದೆ.ತೃತೀಯ ಕ್ವಾರ್ಟರ್ ಫೈನಲ್ನಲ್ಲಿ ಎನ್ಎಂಸಿ ತಂಡ ಐವರ್ನಾಡು ಗೆಳೆಯರ ತಂಡದ ವಿರುದ್ಧ 31-28 ಅಂಕಗಳ ಅಂತರದಲ್ಲಿ ಗೆದ್ದು ಸೆಮಿಗೇರಿತು.ಕೊನೆಯ ಕ್ವಾರ್ಟರ್ ಫೈನಲ್ನಲ್ಲಿ ಬ್ಯಾಂಕ್ ಆಫ್ ಬರೋಡಾ ತಂಡ 32-16 ಅಂಕಗಳ ಅಂತರದಲ್ಲಿ ವಿದ್ಯಾಂಜನೇಯ ಉಳ್ಳಾಳ ತಂಡವನ್ನು ಪರಾಭವಗೊಳಿಸಿ ಸೆಮಿ ಫೈನಲ್ಗೆ ಪ್ರವೇಶ ಪಡೆಯಿತು.