ಮೈಸೂರು: ವಿಧಾನಪರಿಷತ್ ನೈರು ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ 1,642 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.ಅವರು 3,309 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ
ಕೆ.ಕೆ. ಮಂಜುನಾಥ್ಕುಮಾರ್ 1,667 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಹರೀಶ್ ಆಚಾರ್ಯ 708 ಮತಗಳನ್ನು ಪಡೆದಿದ್ದಾರೆ. ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಕೆ.ವಿವೇಕಾನಂದ 1,278 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.ಅವರು 3757 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಮರಿತಿಬ್ಬೇಗೌಡ 2,479 ಮತಗಳನ್ನು ಪಡೆದಿದ್ದಾರೆ.ಮೊದಲ ಸುತ್ತಿನಲ್ಲಿ 7000 ಮತಗಳ ಎಣಿಕೆ ನಡೆದಿದೆ. ಮಾಜಿ ಶಾಸಕ 36, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ 11 ಮತಗಳನ್ನಷ್ಟೆ ಪಡೆದಿದ್ದಾರೆ. ನಿವೃತ್ತ ಡಿಡಿಪಿಯು ನಾಗಮಲ್ಲೇಶ್ 165 ಹಾಗೂ ಹ.ರ.ಮಹೇಶ್ 114 ಮತಗಳನ್ನು ಗಳಿಸಿದ್ದಾರೆ.