ಕುಕ್ಕುಜಡ್ಕ:ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾಧಾಕೃಷ್ಣ ಬೊಳ್ಳೂರುರವರಿಗೆ ಅಮರ ಪಡ್ನೂರು ಗ್ರಾಮದ ಅಭಿಮಾನಿಗಳಿಂದ ಹುಟ್ಟೂರ ಅಭಿನಂದನೆ ಕಾರ್ಯಕ್ರಮ ಕುಕ್ಕುಜಡ್ಕ ಅಮರ ಸಭಾಭವನದಲ್ಲಿ ಇಂದು ನಡೆಯಿತು. ಚೊಕ್ಕಾಡಿ ಉಳ್ಳಾಕುಲು ಯಾನೆ ನಾಯರ್ ದೈವಸ್ಥಾನದ ಅಧ್ಯಕ್ಷ ಶ್ರೀನಾಥ್ ನೆಲ್ಲಿಕುಂಜ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು
ಕುಕ್ಕುಜಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಮೂಕಮಲೆ ಉದ್ಘಾಟಿಸಿದರು. ಶಿಕ್ಷಕ, ಶಶಿಧರ್ ಎಂ ಜೆ ಮೋಂಟಡ್ಕ,
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಅಂಬೇಕಲ್ಲು,ವೆಂಕಟ್ರಮಣ ಗೌಡ ಇಟ್ಟಿಗುಂಡಿ, ಅಣ್ಣಾಜಿ ಗೌಡ ಮಾತನಾಡಿದರು.
ಅಭಿನಂದನೆ ಸ್ವೀಕರಿಸಿದ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ಊರಿನ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಶ್ರಮಿಸಿದ್ದೇನೆ. ಮುಂದೆ ಪಕ್ಷ ಸಂಘಟನೆ ಜೊತೆಗೆ ಜನರ ಪ್ರೀತಿ ಗೆಲ್ಲುವ ಕೆಲಸ ಮಾಡುತ್ತೇನೆ ಎಂದರು.

ಅಮರ ಪಡ್ನೂರು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ರಾಮಯ್ಯ ರೈ, ಚೊಕ್ಕಾಡಿ ಉಳ್ಳಾಕುಲು ಯಾನೆ ನಾಯರ್ ದೈವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯೆ ಸರೋಜ ಯತೀಶ್ ಹಿರಿಯಡ್ಕ, ಅರೋಗ್ಯ ರಕ್ಷಾ ಸಮಿತಿ ಸದಸ್ಯ ಚಂದ್ರನ್ ಕೂಟೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಮರ ಮುಡ್ನೂರು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೂವಪ್ಪ ಗೌಡ ಅರ್ನೋಜಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ ಯತೀಶ್ ಹಿರಿಯಡ್ಕ ವಂದಿಸಿದರು. ವಿನಯ ಸಂಕೇಶ ಕಾರ್ಯಕ್ರಮ ನಿರೂಪಿಸಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಅಸಂಘಟಿತ ಕಾರ್ಮಿಕರ ಘಟಕ ಅಧ್ಯಕ್ಷ ಮಂಜುನಾಥ್ ಕಂದಡ್ಕ, ಪ್ರಮುಖರಾದ ಶಿವಕುಮಾರ್ ಕಂದಡ್ಕ, ರಕ್ಷಿತ್ ದೊಡ್ಡಡ್ಕ, ಪವನ್ ಮುಂಡ್ರಾಜೆ, ಸತ್ಯಪ್ರಸಾದ್ ಪುಳಿಮಾರಡ್ಕ, ಹರೀಶ್ ಕುಕ್ಕುಜಡ್ಕ, ಹರ್ಷವರ್ಧನ್ ಬೊಳ್ಳೂರು, ರವಿ ಪೂಜಾರಿ ಸೇರಿದಂತೆ ಅಮರ ಮುಡ್ನೂರು – ಪಡ್ನೂರು ಗ್ರಾಮದ ನೂರಾರು ಅಭಿಮಾನಿಗಳು ಹಿತೈಷಿಗಳು, ಸಾರ್ವಜನಿಕರು ಭಾಗವಹಿಸಿದ್ದರು.








