ಸುಳ್ಯ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೇ.8ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ನಿರ್ಮಾಣ ಪೂರ್ತಿಗೊಂಡ ಕೆಲವು
ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. ಜನಸಂಪರ್ಕ ಸಭೆ ನಡೆಯಲಿದೆ. ಜನಸಂಪರ್ಕ ಸಭೆಯಲ್ಲಿ ಜನರು ಮುಂದಿರಿಸುವ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಫಾಲೋ ಆಫ್ ನಡೆಯಲಿದೆ ಎಂದು ಅವರು ವಿವರಿಸಿದರು. ಸಚಿವರ ಭೇಟಿ ಕುರಿತು ಟಿಪಿ ಇನ್ನಷ್ಟೇ ಬರಬೇಕಾಗಿದೆ ಎಂದು ಬೊಳ್ಳೂರು ವಿವರಿಸಿದರು.













