ಸುಳ್ಯ:ಜೂ.18 ರಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ. ಕ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರು ಸುಳ್ಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ ಪಂಚಾಯತ್ ಉಪ ವಿಭಾಗದ ನೂತನ ಕಚೇರಿಗೆ ಭೇಟಿ ನೀಡಿ ಜಿಲ್ಲಾ
ಪಂಚಾಯತ್ ಕಾರ್ಯಪಾಲಕ ಅಭಿಯಂತರರಾದ ವೇಣುಗೋಪಾಲ್ ಆರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀಮತಿ ಚೈತ್ರ ಎಸ್ ಆರ್, ಸಹಾಯಕ ಇಂಜಿನಿಯರ್ ಮಣಿಕಂಠನ್ ಜೊತೆ ಚರ್ಚಿಸಿ ಉದ್ಘಾಟನಾ ಕಾರ್ಯಕ್ರಮದ ಪೂರ್ವತಯಾರಿ ಮತ್ತು ಕಾರ್ಯಕ್ರಮದ ರೂಪುರೇಷೆ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಇಲ್ಲಿನ ಸಿಬ್ಬಂದಿ ಕೊರತೆ ಬಗ್ಗೆ ಕೂಡಲೇ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ ಪ್ರಯತ್ನಿಸುವುದಾಗಿ ರಾಧಾಕೃಷ್ಣ ಬೊಳ್ಳೂರು ತಿಳಿಸಿದರು. ಸಚಿವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ರಾಧಾಕೃಷ್ಣ ಬೊಳ್ಳೂರು ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಭೂನ್ಯಾಯ ಮಂಡಳಿ ಮಾಜಿ ಸದಸ್ಯ ಭೋಜಪ್ಪ ನಾಯ್ಕ ವಿನೋಭಾನಗರ, ವಿಜಯಕುಮಾರ್ ಆಲೆಟ್ಟಿ, ಅಬ್ದುಲ್ ರಜಾಕ್ ಸುಳ್ಯ, ರವಿಪ್ರಸಾದ್ ಕೇರ್ಪಳ, ಜಿಲ್ಲಾ ಪಂಚಾಯತ್ ಉಪವಿಭಾಗದ ಸಿಬ್ಬಂದಿಗಳು, ಉಪಸ್ಥಿತರಿದ್ದರು.