ಸುಳ್ಯ: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಮಂಗಳೂರಿನಲ್ಲಿ ಅವರು ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಧಾಕೃಷ್ಣ ಬೊಳ್ಳೂರು 12 ವರ್ಷದ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿಗೆ ಗುಡ್ಬೈ ಹೇಳಿರುವ ರಾಧಾಕೃಷ್ಣ ಬೊಳ್ಳೂರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ರಾಧಾಕೃಷ್ಣ ಬೊಳ್ಳೂರು ಖಚಿತಪಡಿಸಿದ್ದಾರೆ.












