ಸುಳ್ಯ:ಸುಳ್ಯ ಬಿಜೆಪಿಯ ಪ್ರಭಾವಿ ಮುಖಂಡ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರು ಕೆಲವು ಸಮಯದಿಂದ ಬಿಜೆಪಿ ಪಕ್ಷದಲ್ಲಿ ತಟಸ್ಥರಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ಸುಳ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರ ಗೈರು ಎದ್ದು ಕಾಣುತ್ತಿತ್ತು. ಸಾಮಾನ್ಯವಾಗಿ ಸುಳ್ಯದಲ್ಲಿ ನಡೆಯುವ ಎಲ್ಲಾ ಬಿಜೆಪಿ ಕಾರ್ಯಕ್ರಮಗಳಲ್ಲಿಯೂ
ಮುಂಚೂಣಿಯಲ್ಲಿ ಇರುತ್ತಿದ್ದ ರಾಧಾಕೃಷ್ಣ ಬೊಳ್ಳೂರು ಪ್ರತಿಭಟನೆ ಬಗ್ಗೆ ಮಾಹಿತಿ ನೀಡಲು ಕರೆದ ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿಯೂ ಗೈರು ಹಾಜರಿಯಾಗಿದ್ದರು. ಇತ್ತೀಚಿನ ಹಲವು ಬಿಜೆಪಿ ಕಾರ್ಯಕ್ರಮಗಳಲ್ಲಿಯೂ ಬೊಳ್ಳೂರು ಉಪಸ್ಥಿತಿ ಅಸ್ಟಕ್ಕಷ್ಟೇ.
ಮತ್ತೆ ಕಾಂಗ್ರೆಸ್ ಸೇರುತ್ತಾರೆಯೇ ಬೊಳ್ಳೂರು:
ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬಂದ ರಾಧಾಕೃಷ್ಣ ಬೊಳ್ಳೂರು ಅವರು ಮತ್ತೆ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಊಹಾಪೂಹ ಇದೀಗ ಹರಿದಾಡುತಿದೆ. ಇತ್ತೀಚೆಗೆ ಕಾಂಗ್ರೆಸ್ ಮುಖಂಡರ ಜೊತೆಗಿರುವ ಬೊಳ್ಳೂರು ಅವರ ಚಿತ್ರ ಸಾಮಾಜಿಕ ಜಾಲತಣದಲ್ಲಿ ಹರಿದಾಡಿತ್ತು. ಇದೀಗ ಬಿಜೆಪಿ ಕಾರ್ಯಕ್ರಮಗಳಿಂದ ದೂರ ಉಳಿದಿರುವ ರಾಧಾಕೃಷ್ಣ ಬೊಳ್ಳೂರು ಅವರು ಮತ್ತೆ ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರಾ ಎಂಬ ಕುತೂಹಲ, ಚರ್ಚೆ ಗರಿಗೆದರಿದೆ.
ಅಸಮಾಧಾನಕ್ಕೆ ಕಾರಣ ಏನು:
ಕಳೆದ ಕೆಲವು ಸಮಯದಿಂದ ರಾಧಾಕೃಷ್ಣ ಬೊಳ್ಳೂರು ಹಾಗೂ ಬಿಜೆಪಿ ಮಧ್ಯೆ ಕೆಲವೊಂದು ಅಸಮಾಧಾನ ಇದೆ ಎಂದು ಹೇಳಲಾಗುತಿದೆ. ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದಿಂದ ರಾಧಾಕೃಷ್ಣ ಬೊಳ್ಳೂರು ಅವರನ್ನು ಅರ್ಧದಲ್ಲಿ ಬದಲಿಸಿದ್ದು ಹಾಗೂ ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ನಡೆದಾಗ ಅಧ್ಯಕ್ಷತೆ ನೀಡದೇ ಇದ್ದದು ಕೂಡ ವೈಮನಸ್ಸಿಗೆ ಕಾರಣವಾಗಿತ್ತು ಎಂದು ಹೇಳಲಾಗುತಿದೆ.
ಪ್ರಭಾವಿ ನಾಯಕ:
ಬಿಜೆಪಿಯಲ್ಲಿರಲಿ, ಕಾಂಗ್ರೆಸ್ನಲ್ಲಿರಲಿ ರಾಧಾಕೃಷ್ಣ ಬೊಳ್ಳೂರು ಅವರು ಪ್ರಭಾವಿ ನಾಯಕ. ಅಮರಮುಡ್ನೂರು, ಅಮರ ಪಡ್ನೂರು ಸೇರಿದಂತೆ ತಾಲೂಕಿನಾದ್ಯಂತ ತಮ್ಮದೇ ಬೆಂಬಲಿಗರು,ರಾಜಕೀಯ ಸ್ನೇಹಿತ ವಲಯವನ್ನು ಹೊಂದಿದ್ದಾರೆ.ಕಾಂಗ್ರೆಸ್ನಲ್ಲಿ ಇದ್ದಾಗ ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಬಿಜೆಪಿ ಸೇರ್ಪಡೆಯಾದ ಬಳಿಕ ಎಪಿಎಂಸಿ ಉಪಾಧ್ಯಕ್ಷ, ತಾಲೂಕು ಪಂಚಾಯತ್ ಸದಸ್ಯ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಈಗ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿದ್ದಾರೆ.
ಇದೀಗ ಉಂಟಾಗಿರುವ ರಾಜಕೀಯ ಊಹಾಪೋಹಗಳ
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಧಾಕೃಷ್ಣ ಬೊಳ್ಳೂರು
‘ಇತ್ತೀಚಿನ ಕೆಲವು ತಿಂಗಳಿನಿಂದ ಬಿಜೆಪಿ ಪಕ್ಷದ ಚಟುವಟಿಕೆಗಳಿಗೆ ನನ್ನನ್ನು ಅಸ್ಟಾಗಿ ಕರೆಯುವುದಿಲ್ಲ. ಇದರಿಂದ ರಾಜಕೀಯ ಚಟುವಟಿಕೆಗಳಿಂದ ಸ್ವಲ್ಪ ದೂರ ಉಳಿದಿದ್ದನೆ.ಯಾವುದೇ ಪಕ್ಷ ಬದಲಾವಣೆಯ ಬಗ್ಗೆ ಯೋಚನೆ ಮಾಡಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.