ಸುಳ್ಯ:ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೋಳುಬೈಲು ಎಂಬಲ್ಲಿ ಕಾರು ಅಪಘಾತ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಬೋಳುಬೈಲಿನಲ್ಲಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಕಾರಿನಲ್ಲಿದ್ದ 2 ಮಂದಿ ಗಾಯಗೊಂಡರು. ಕಾರಿನಲ್ಲಿ ಮಗು ಸೇರಿ 4 ಮಂದಿ ಇದ್ದರು. ಇಬ್ಬರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳೀಯರು ಹಾಗೂ ಆಂಬ್ಯುಲೆನ್ಸ್ ಚಾಲಕರ ಸಹಕಾರದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು.












