ಸುಳ್ಯ:ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿದೆ. ಹಸಿರುವಾಣಿ ಸಮರ್ಪಣೆ ಮಾಡಿ ಉಗ್ರಾಣ ತುಂಬುವ ಮೂಲಕ

ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಗಿದೆ. ಮಾ.15ರಂದು ಬೆಳಗ್ಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ ನಡೆಯಿತು. ಬಳಿಕ ಸಾಮೂಹಿಕ ಪ್ರಾರ್ಥನೆಯಾಗಿ ಉಗ್ರಾಣ ತುಂಬಿಸಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ ಹಸಿರುವಾಣಿ ಮೆರವಣಿಗೆಗೆ ಚಾಲನೆ ನೀಡಿದರು.

ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಹಾಗೂ ಪದಾಧಿಕಾರಿಗಳು, ಸದಸ್ಯರು, ಭಕ್ತರು ಭಾಗವಹಿಸಿದ್ದರು.
ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.

