ಸುಳ್ಯ:ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿದೆ.ಮಾ.15ರಂದು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯಾಗಿ ಉಗ್ರಾಣ ತುಂಬಿಸುವುದು.ಬಳಿಕ ಸುಳ್ಯ ಚೆನ್ನಕೇಶವ ದೈವಸ್ಥಾನದ ವಠಾರದಿಂದ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ ಬಳಿಕ
ಭಜನೆ ನಡೆಯುವುದು.ಸಂಜೆ ಕ್ಷೇತ್ರಕ್ಕೆ ತಂತ್ರಿಗಳ ಆಗಮನದ ಬಳಿಕ ವೈದಿಕ ಕಾರ್ಯಕ್ರಮ ಆರಂಭಗೊಳ್ಳುವುದು.
ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡು ರಾಧಾಕೃಷ್ಣ ರೈ ಅಧ್ಯಕ್ಷತೆ ವಹಿಸುವರು. ಧಾರ್ಮಿಕ ಚಿಂತಕರಾದ ರಾಜೇಶ್ ಶೆಟ್ಟಿ ಮೇನಾಲ ಧಾರ್ಮಿಕ ಉಪನ್ಯಾಸ ನೀಡುವರು. ಪ್ರಮುಖರಾದ ಹರೀಶ್ ಕಂಜಿಪಿಲಿ, ಎನ್.ಜಯಪ್ರಕಾಶ್ ರೈ, ಡಾ.ಹರಪ್ರಸಾದ್ ತುದಿಯಡ್ಕ, ನಾರಾಯಣ ಕೇಕಡ್ಕ, ಎಂ.ವೆಂಕಪ್ಪ ಗೌಡ, ವಿಕ್ರಮ್ ಅಡ್ಪಂಗಾಯ, ರಿಯಾಝ್ ಕಟ್ಟೆಕ್ಕಾರ್ಸ್, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಮತ್ತಿತರರು ಭಾಗವಹಿಸಲಿದ್ದಾರೆ.ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತುಳುನಾಡ ಸತ್ಯೊಲು ಕಾನದ ಕಟದೆರ್ ತುಳು ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಮಾ.16ರಂದು ಬೆಳಗ್ಗೆ ವೈದಿಕ ಕಾರ್ಯಕ್ರಮಗಳು ನಡೆಸು ಬೆಳಗ್ಗೆ 10.31ರ ವೃಷಭ ಲಗ್ನದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ನಿರ್ಣಯ, ಅಲಂಕಾರ ಪೂಜೆ ನಡೆಯುವುದು.
ಸಂಜೆ ಧಾರ್ಮಿಕ ಸಭೆ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ,ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಪ್ರಮುಖರಾದ ಕೃಷ್ಣ ಕಾಮತ್, ಡಾ.ಲೀಲಾಧರ ಡಿ.ವಿ, ಡಾ.ಉಜ್ವಲ್ ಊರುಬೈಲು, ಸಂತೋಷ್ ಕುತ್ತಮೊಟ್ಟೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್ಯನ್ ಮ್ಯೂಸಿಕಲ್ಸ್ ಸುಳ್ಯ ಇವರಿಂದ ಸಂಗೀತ ರಸಮಂಜರಿ. ಬಳಿಕ ಎಕ್ಸ್ ಟೆಸಿ ಡ್ಯಾನ್ಸ್ ಕ್ರಿವ್ ಸುಳ್ಯ ಇವರಿಂದ ಡಾನ್ಸ್ ಧಮಾಕ ನಡೆಯುವುದು. ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈಭವ ನಡೆಯುವುದು.
ಬ್ರಹ್ಮಕಲಶೋತ್ಸವ ಪ್ರಯುಕ್ತ ಎರಡೂ ದಿನವೂ ಅನ್ನಸಂತರ್ಪಣೆ ಇರುತ್ತದೆ.
ಮಾ.18ರಂದು ಮಂಗಳವಾರ ರಾತ್ರಿ 9ರಿಂದ ದೈವಗಳ ನೇಮೋತ್ಸವ ನಡೆಯುವುದು ಎಂದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ತಿಳಿಸಿದ್ದಾರೆ.