ಸುಳ್ಯ:ಬೂತ್ ಸಂಖ್ಯೆ 171ರಲ್ಲಿ ಬೋರುಗುಡ್ಡೆ, ನಾವೂರು ಭಾಗದಲ್ಲಿ ಕಾಂಗ್ರೆಸ್ ವತಿಯಿಂದ ಬಿರುಸಿನ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು. ಮನೆ ಮನೆ ಭೇಟಿ ನೀಡಿ
ಮತದಾರರಲ್ಲಿ ಮತ ಯಾಚನೆ ಮಾಡಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ನೇತೃತ್ವದಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳಲಾಯಿತು, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀಸ್ ಕುತ್ತಮೊಟ್ಟೆ, ನಗರ ಪಂಚಾಯತ್ ಸದಸ್ಯ ಸಿದ್ದಿಕ್ ಕೊಕ್ಕೊ, ಹನೀಫ್ ಬೀಜಕೊಚ್ಚಿ, ಸಿದ್ದಿಕ್ ಕಟ್ಟೆಕ್ಕಾರ್ ಮತ್ತಿತರರು ಉಪಸ್ಥಿತರಿದ್ದರು.