ಹಾಸನ:ರಾಜ್ಯದಲ್ಲಿ ಪ್ರಸ್ತುತ ಯಾವುದೇ ಬಿಪಿಎಲ್ ಪಡಿತರ ಚೀಟಿ ರದ್ದಾಗುವುದಿಲ್ಲ, ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ನಾಲ್ಕು ಚಕ್ರದ ವಾಹನ ಇರುವವರ
ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂಬ ಸುದ್ದಿ ಹರಡಿತ್ತು. ಈ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯ ಅಂತಹ ಯಾವುದೇ ನಿರ್ಧಾರ ಇಲ್ಲ ಎಂದರು.ಹಾಸನದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವರು, ಮೂರು ಲಕ್ಷ ಅರ್ಜಿಗಳು ಬಂದಿವೆ ಇವೆಲ್ಲವನ್ನು ಪರಿಶೀಲಿಸಿ ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ನೀಡಲಾಗುವುದು ಎಂದರು.