ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2 ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್” ಎಂಬ
ವರದಿಗೆ ಪ್ರಶಸ್ತಿ ಲಭಿಸಿದೆ.ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ.ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ತೀರ್ಪು ಗಾರರಾಗಿದ್ದರು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಜೂ.25ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿದೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡುವರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು.