ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ನಡೆಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ಪತ್ರಿಕಾ ಮಾಧ್ಯಮ ವಿಭಾಗದಲ್ಲಿ
ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ ಭರತ್ರಾಜ್ ಕೆ. ಸನಿಲ್ ಅವರಿಗೆ ಪ್ರದಾನ ಮಾಡಲಾಯಿತು.ಪೊಲೀಸ್ ಕಮಿಷನರ್ ಕುಲದೀಪ್ ಆರ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು.ಆಕಾಶವಾಣಿ ನಿವೃತ್ತ ಕಾರ್ಯಕ್ರಮ ನಿರ್ವಹಣಾ ಧಿಕಾರಿ ಡಾ.ಸದಾನಂದ ಪೆರ್ಲ ಅವರು ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು .
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಜಿಲ್ಲಾ ವಾರ್ತಾಧಿಕಾರಿ ರವಿರಾಜ್, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ರಾಜ್ಯ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ, ರಾಜ್ಯ ಸಮಿತಿ ನಾಮ ನಿರ್ದೇಶಿತ ಸದಸ್ಯ ಇಬ್ರಾಹಿ ಅಡ್ಕಸ್ಥಳ,ಮಂಗಳೂರು ಪ್ರೆಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಉಪಸ್ಥಿತರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಮತ್ತು ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಪ್ರಶಸ್ತಿ ವಿಜೇತರ ಸನ್ಮಾನ ಪತ್ರ ವಾಚಿಸಿ ದರು.ಮಹಮ್ಮದ್ ಆರಿಫ್ ಕಾರ್ಯಕ್ರಮ ನಿರೂ ಪಿಸಿದರು.ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆಯ ನಿವೃತ್ತ ಸಿಬ್ಬಂದಿ ಪೂವಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪತ್ರಿಕಾ ದಿನಾಚರಣೆಯ ಅಂಗವಾಗಿ ಪತ್ರಿಕಾ ಭವನದಲ್ಲಿ ಖ್ಯಾತ ವ್ಯಂಗ್ಯ ಚಿತ್ರ ಕಲಾವಿದ ಜಾನ್ ಚಂದ್ರ ನ್ ಅವರ ವ್ಯಂಗ್ಯ ಚಿತ್ರ, ರೇಖಾಚಿತ್ರಗಳ ಪ್ರದರ್ಶನವನ್ನು ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ಉದ್ಘಾಟಿಸಿದರು.