ಮಂಗಳೂರು : ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ. ಹೇಳಿದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ದ.ಕ.ಜಿಲ್ಲಾ ಪೊಲಿಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು
ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ .ಎನ್., ದ.ಕ.ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಪಂದ್ಯಾಟ ಟ್ರೋಫಿ ಅನಾವರಣಗೊಳಿಸಿದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ ಇಂದಾಜೆ ಅಧ್ಯಕ್ಷ ತೆ ವಹಿಸಿದ್ದರು.
ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ,ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ. ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್ ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್ ತಂಡದ ಸಿದ್ದಾರ್ಥ ಹಾಗೂಪಂದ್ಯ ಪುರುಷನಾಗಿ ಹಾಗೂ ಸರಣಿ ಶ್ರೇಷ್ಠ ಆಟಗಾರನಾಗಿ ದಕ್ಷಿಣ ಕನ್ನಡ ಎಸ್ ಪಿ ತಂಡದ ಶಿವಕುಮಾರ್ ಪ್ರಶಸ್ತಿ ಪಡೆದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ,ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ,ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿ ಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಬಹುಮಾನಿತರ ವಿವರ ನೀಡಿದರು.