ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ ಭರತ್ರಾಜ್ ಕೆ. ಸನಿಲ್ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ
2022ರ ಜೂ.13ರಂದು ಪ್ರಕಟಗೊಂಡ “ಮತ್ತೆ ಒಂದಾಗಲಿ ಒಡೆದ ಮನಸ್ಸುಗಳು” ಮತ್ತು ಸುವರ್ಣ ನ್ಯೂಸ್ನಲ್ಲಿ 2022ರ ಏ.19ರಂದು ಪ್ರಸಾರಗೊಂಡ “ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನ ಸೌಹಾರ್ದತೆಯ ಕಥೆ”ವಿಶೇಷ ವರದಿಗೆ ಪ್ರಶಸ್ತಿ
ಸುರೇಶ್ ಪಳ್ಳಿ
ಭರತ್ ರಾಜ್
ಲಭಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.1ರಂದು ಪೂರ್ವಾಹ್ನ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಆಕಾಶವಾಣಿ ನಿವೃತ್ತ ಅಧಿಕಾರಿ ಸದಾನಂದ ಪೆರ್ಲ ಪ್ರಶಸ್ತಿ ಪ್ರದಾನ ಮಾಡುವರು. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು.