ಸುಳ್ಯ:ವಿದ್ಯುತ್ ಲೈನ್ಗಳ ಬ್ರೇಕ್ ಡೌನ್ ಕಾಮಗಾರಿ ದರದಲ್ಲಿ ತೀವ್ರ ಇಳಿಕೆ ಮಾಡಿರುವ ಕಾರಣ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬ್ರೇಕ್ ಡೌನ್ ಕಾಮಗಾರಿ ಸ್ಥಗಿತಗೊಳಿಸಿ ಕರ್ನಾಟಕ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ನಡೆಸಿದ್ದ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ ಎಂದು
ಸಂಘದ ಅಧ್ಯಕ್ಷ ಸೋಮಶೇಖರ ಪೈಕ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಬೆಂಗಳೂರು ಜಿಲ್ಲಾ ಸಮಿತಿ ಮಂಗಳೂರು ಉಪಸಮಿತಿ ಸುಳ್ಯ
ಗುತ್ತಿಗೆದಾರರ ಸಮಸ್ಯೆ ಬಗ್ಗೆ ಅಧೀಕ್ಷಕ ಅಭಿಯಂತರರಿಗೆ ಮನವಿ ನೀಡಲಾಗಿತ್ತು. ಅವರು ಚರ್ಚಿಸಿ ಬ್ರೇಕ್ ಡೌನ್ ಹಾಗೂ ಇನ್ನಿತರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ಹಿಂದೆ ಪಡೆದಿದ್ದು ಇಂದಿನಿಂದ ಕೆಲಸ ಪ್ರಾರಂಭಿಸಲು ಗುತ್ತಿಗೆದಾರರ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸೋಮಶೇಖರ ಪೈಕ ತಿಳಿಸಿದ್ದಾರೆ.