ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ 15 ರಾಷ್ಟ್ರಗಳ ಸರ್ಕಾರಗಳ ಮುಖ್ಯಸ್ಥರೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್, ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್, ಅಬುಧಾಬಿಯ
ಯುವರಾಜ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೇರಿದಂತೆ ನಾಯಕರೊಂದಿಗೆ ಜಾಗತಿಕ ಶಾಂತಿ, ಸಹಕಾರ, ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮೋದಿ ಚರ್ಚಿಸಿದ್ದಾರೆ.
ನವದೆಹಲಿಯ ಭಾರತ ಮಂಟಪದಲ್ಲಿ ಸೆಪ್ಟೆಂಬರ್ 12, 13ರಂದು ಬ್ರಿಕ್ಸ್ ಸಮಾವೇಶ ನಡೆಯಿತು. 11 ಸದಸ್ಯ ರಾಷ್ಟ್ರಗಳ ನಾಯಕರು, 10 ಪಾಲುದಾರ ದೇಶಗಳು ಮತ್ತು ಹಲವು ಅಂತರರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದರು.











