ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಳೆ (ಎ.17ರಂದು)ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಿಗ್ಗೆ 8ಕ್ಕೆ ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರಕ್ಕೆ ಭೇಟಿ ನೀಡಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರು 8.30ಕ್ಕೆ
ಮಾಜಿ ಸೈನಿಕ ಅಡ್ಡಂತ್ತಡ್ಕ ದೇರಣ್ಣ ಗೌಡರ ಮನೆ ಭೇಟಿ ಮಾಡುವರು. 9ಕ್ಕೆ ಮಂಡೆಕೋಲು ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗುವ ಬಿಜೆಪಿ ಕಾರ್ಯಕರ್ತರುಗಳ ಸಭೆಯಲ್ಲಿ ಮಾತನಾಡಲಿದ್ದಾರೆ.
10.15ಕ್ಕೆ ಕೆವಿಜಿ ಕ್ಯಾಂಪಸ್ ಭೇಟಿ ನೀಡಲಿರುವ ಅವರು 11ಕ್ಕೆ ಸುಳ್ಯ ಶ್ರೀ ವೆಂಕಟ್ರಮಣ ದೇವ ಮಂದಿರಕ್ಕೆ ಭೇಟಿ ನೀಡುವರು. 11.15ಕ್ಕೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು.
11.30ಕ್ಕೆ ಅರಂತೋಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮತಯಾಚನೆ ಮಾಡಲಿದ್ದಾರೆ. 12.30ಕ್ಕೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.
2.30ಕ್ಕೆ ಹಿರಿಯ ಬಿಜೆಪಿ ಕಾರ್ಯಕರ್ತ ಬಿ.ಕೆ. ಬೆಳ್ಯಪ್ಪ ಗೌಡ ಕಡ್ತಲ್ಕಜೆ ಅವರ ಮನೆಗೆ ಭೇಟಿ ನೀಡಲಿದ್ದಾರೆ.
ಅಪರಾಹ್ನ 3ಕ್ಕೆ ಹರಿಹರಪಲ್ಲತ್ತಡ್ಕದಲ್ಲಿ ನಡೆಯಲಿರುವ ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು ಭಾಗದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮತಯಾಚನೆ ನಡೆಸಲಿದ್ದಾರೆ. 4ಕ್ಕೆ ಕುಲ್ಕುಂದ ಬಸವೇಶ್ವರ ದೇವಸ್ಥಾನ, 4.30ಕ್ಕೆ ಮರ್ಧಾಳ
ಮಹಾಲಿಂಗೇಶ್ವರ ದೇವಸ್ಥಾನಕ್ಕೆ, 5ಕ್ಕೆ ಇಚ್ಲಂಪಾಡಿ ಉಳ್ಳಾಕುಲ ದೈವಸ್ಥಾನದ ಜಾತ್ರೋತ್ಸವಕ್ಕೆ
ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.5.30ಕ್ಕೆ ಕಡಬ ತಾಲೂಕಿನ ಗೋಳಿತೊಟ್ಟು ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ
ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮತಯಾಚನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.