ಸುಳ್ಯ:ಅಧಿಕಾರಿಗಳ ಸಭೆ ನಡೆಸುವುದರಲ್ಲೆ ಕಾಲ ಕಳೆಯುತ್ತಿರುವ ರಾಜ್ಯ ಸರಕಾರ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ.
ಯಾವುದೇ ಅನುದಾನ ನೀಡದೇ ಗುದ್ದಲಿ ಪೂಜೆ ಮಾಡದ ಸರಕಾರ ಸಿದ್ಧರಾಮಯ್ಯ ಸರಕಾರ ಎಂದು ಸಂಸದ ಕ್ಯಾ ಬ್ರಿಜೇಶ್ ಚೌಟ ಹೇಳಿದರು. ಸುಳ್ಯದ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆದ ಬಿಜೆಪಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರದ ಅಭಿವೃದ್ಧಿ ಕುರಿತು ಕಾಂಗ್ರೆಸ್ ಶಾಸಕರಿಗೆ ಕೂಡ ಪ್ರಶ್ನೆಗಳು
ಉದ್ಭವಿಸಿದೆ ಎಂದು ಹೇಳಿದರು. ಸರಕಾರದ ಇಂತಹ ಕೆಲಸಗಳನ್ನು ಜನರಿಗೆ ತಿಳಿಸುವ ಕೆಲಸಗಳು ಆಗಬೇಕು ಎಂದು ಹೇಳಿದರು. ರಾಜ್ಯದಲ್ಲಿ ಅನುದಾನಗಳ ಕೊರತೆ ಇದೆ ಅಭಿವೃದ್ಧಿ ಮಾಡುತ್ತಿಲ್ಲ ಎಂದು ದೂರಿದರು. ಹಿಂದಿನ ಸರಕಾರಗಳ ಅಧಿಕಾರದ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ರಿಬ್ಬನ್ ಕತ್ತರಿಸುವ ಕೆಲಸ ಮಾತ್ರ ಮಾಡುತ್ತಿದ್ದಾರೆ ಎಂದು ಹೇಳಿದರು. ಮಾಜಿ ಸಂಸದರಾದ ಕಟೀಲ್ ಅವರು ತಂದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವುದು ನನ್ನ ಆದ್ಯತೆ ಎಂದು ಹೇಳಿದರು. ಹೆದ್ದಾರಿ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು
ಹೇಳಿದರು. ಜಿಲ್ಲೆಯ ಯುವಜನತೆಗೆ ಉದ್ಯೋಗ ನೀಡುವ ದೃಷ್ಟಿಯಲ್ಲಿ ಅದಕ್ಕೆ ಬೇಕಾಗುವ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇನೆ. ಅದರ ಪೂರ್ವ ತಯಾರಿಯ ಮೊದಲ ಸಭೆ ಕೆಲವೇ ದಿನಗಳಲ್ಲಿ ನಡೆಯಲಿದೆ ಎಂದು ಹೇಳಿದರು . ಕೇಂದ್ರದ ಯೋಜನೆಯಲ್ಲಿ ಸುಳ್ಯಕ್ಕೂ ಅನುದಾನ ನೀಡಲಾಗಿದೆ ಎಂದು ಹೇಳಿದರು. ಸಂಸದರಿಗೆ 5 ಕೋಟಿ ಅನುದಾನ ನೀಡಲಾಗುತ್ತಿದೆ. ಅದನ್ನು ಮಂಡಲಗಳಿಗೆ ಅನುದಾನವನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. ಸಿಎಸ್ಆರ್ ಫಂಡ್ ಕೂಡ ಪಕ್ಷದ ಅಧ್ಯಕ್ಷರ ಗಮನಕ್ಕೆ ತಂದು ಮಾಡೋಣ ಎಂದು ಹೇಳಿದರು. ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ನೋಟಾ ಅಭಿಯಾನಕ್ಕೆ ಟಾಂಗ್:
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೆಲವರು ಮತದಾನ ಬಹಿಷ್ಕಾರ ನೋಟ ಅಭಿಯಾನ , ಜಾತಿ ಅಭಿಯಾನ ಎಂದೆಲ್ಲ ಮಾಡಿದರು ಆದರೆ ಜಿಲ್ಲೆಯ ಜನತೆ ಮತ್ತು ಕಾರ್ಯಕರ್ತರು ನನ್ನ ಗೆಲುವಿಗೆ ಕಾರಣಿಭೂತರಾಗಿದ್ದಾರೆ ಎಂದು ಹೇಳಿದರು.ಬಲಿಷ್ಟ ಭಾರತ ನಿರ್ಮಾಣಕ್ಕೆ ಡ್ರಗ್ಸ್ ನ ವಿರುದ್ದ ನಾವೆಲ್ಲಾ ಹೋರಾಡಬೇಕಾಗಿದೆ. ಅಲ್ಲದೇ ಪೋಲಿಸ್ ಅಧಿಕಾರಿಗಳನ್ನು ಮಾತ್ರ ನಂಬಿಕೊಂಡು ಕುಳಿತುಕೊಳ್ಳದೇ ಡ್ರಗ್ಸ್ ವಿರುದ್ದ ಹೋರಾಟಕ್ಕೆ ನಾವೆಲ್ಲಾ ಕೈ ಜೋಡಿಸಬೇಕು ಎಂದು ಹೇಳಿದರು.
ಅನುದಾನ ಬರುತ್ತಿಲ್ಲ-ಬಂದ ಅನುದಾನವೂ ಕಡಿತವಾಗುತಿದೆ-ಭಾಗೀರಥಿ ಮುರುಳ್ಯ
ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ಸರಕಾರದಿಂದ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲ, ಮಂಜೂರಾದ ಅನುದಾನವೂ ಕಡಿತ ಮಾಡಲಾಗುತಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ವಿಶೇಷ ಕಾರ್ಯಕಾರಿಣಿಯನ್ನು
ಉದ್ಘಾಟಿಸಿದರು.ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಕೇಶ್ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಕಾರ್ಯದರ್ಶಿ ವಿನಯ ಕುಮಾರ್ ಮುಳುಗಾಡು, ಮಂಡಲ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಮಂಡಲದ ಮಾಜಿ ಅಧ್ಯಕ್ಷರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ ಸ್ವಾಗತಿಸಿ, ಪ್ರದೀಪ್ ರೈ ಮನವಳಿಕೆ ಕಾರ್ಯಕ್ರಮ ನಿರೂಪಿಸಿದರು.