ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತದಾರರು ಬಿರು ಬಿಸಿಲನ್ನೂ ಲೆಕ್ಕಿಸದೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಮತದಾನಕ್ಕೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಇದಕ್ಕಾಗಿ ಮತದಾರ
ಬಾಂಧವರಿಗೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅಭಿನಂದನೆ ಸಲ್ಲಿಸಿದ್ದಾರೆ.
ಅಲ್ಲದೆ, ಇಡೀ ಚುನಾವಣಾ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಸಹಕರಿಸಿದ ಪೊಲೀಸ್ ಇಲಾಖೆ, ಜಿಲ್ಲಾಡಳಿತದ ಅಧಿಕಾರಿ ವರ್ಗಕ್ಕೂ ಧನ್ಯವಾದ ಹೇಳಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ, ಪಕ್ಷದ ಕಾರ್ಯಕರ್ತರು ಪ್ರಖರ ಬಿಸಿಲಿನ ನಡುವೆಯೂ ಒಟ್ಟಾಗಿ ಮತದಾನ ಪ್ರಕ್ರಿಯೆಗೆ ಕೈಜೋಡಿಸಿದ್ದಾರೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ
ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.