ಮಂಗಳೂರು:ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ
ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಚರ್ಚಿಸಿದರು.ಸುಳ್ಯ ತಾಲೂಕಿನ ತೊಡಿಕಾನದ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ನೆಟ್ವರ್ಕ್ ಸಮಸ್ಯೆ ಇದೆ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೈಗೊಳ್ಳಬಹುದಾದ ಸೂಕ್ತ ಪರಿಹಾರ ಕಾರ್ಯದ ಕುರಿತು ಚರ್ಚಿಸಿದರು. ಟವರ್ಗೆ ಹೊಸ ಬ್ಯಾಟರಿ ಅಳವಡಿಕೆ ಸೇರಿದಂತೆ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕು.ಬಿಎಸ್ಎನ್ಎಲ್ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಇತರ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಸಂಸದರ ಕಚೇರಿ ಮಾಹಿತಿ ನೀಡಿದೆ.