ಸುಳ್ಯ: ಮಾಜಿ ಮುಖ್ಯಮಂತ್ರಿ ಬಿ.ಯಸ್ ಯಡಿಯೂರಪ್ಪ ಜೂ.24ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ. ಸುಳ್ಯದ ಅಂಬಟೆಡ್ಕದಲ್ಲಿರುವ ಬಿಜೆಪಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.ಜೂ.23ರಂದು ಸಂಜೆ
ಧರ್ಮಸ್ಥಳ ಭೇಟಿ ನೀಡಲಿರುವ ಅವರು, ಜೂ.24ರಂದು ಸೋಮವಾರ ಬೆಳಿಗ್ಗೆ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ, ತುಲಾಭಾರ ಸೇವೆ ನೆರೆವೇರಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಸುಳ್ಯಕ್ಕೆ ಆಗಮಿಸಲಿರುವ ಅವರು ನೂತನ ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.