ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಿದರು.ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ 10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ ಮಾಡಲಾಗುವುದು ಎಂದು ಘೋಷಿಸಿದ್ದಾರೆ.ರಾಜ್ಯದ ಪ್ರಮುಖ
ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಿದರು.ಕರ್ನಾಟಕದ 45ಕ್ಕೂ ಹೆಚ್ಚಿನ ಉತ್ಪನ್ನಗಳಿಗೆ ಜಿಐ ಮಾನ್ಯತೆ
ಸಶಕ್ತ ಹಾಗೂ ಸುಸ್ಥಿರ ಅಭಿವೃದ್ಧಿ ಮಾದರಿ, ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳು, ಜನಸ್ನೇಹಿ ಆಡಳಿತ
ಐಐಟಿ ಧಾರವಾಡ ಸಹಯೋಗದೊಂದಿಗೆ 8ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 12 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಟ್ಯೂಟರ್ ಸೌಲಭ್ಯಕ್ಕೆ 5 ಕೋಟಿ ಅನುದಾನ,ಶಾಲಾ, ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು
1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ, ಪಿಯುಸಿ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣ ಪುಸ್ತಕ, ಪಠ್ಯ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಖಾಲಿ ಇರುವ ಶಿಕ್ಷಕರ ಹುದ್ದೆ ನೇಮಕಾತಿಗೆ ಆದ್ಯತೆ,
ಉತ್ತಮ ಕಲಿಕೆ ಭವಿಷ್ಯ ಎಂಬ ಘೋಷವಾಕ್ಯದಡಿ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣ.ಇದಕ್ಕಾಗಿ 3 ಸಾವಿರ ಕೋಟಿ ಮೀಸಲು ಎಲ್ಲಾ ಜಿಲ್ಲೆಗಳಲ್ಲಿ ಏತನೀರಾವರಿ, ಚೆಕ್ಡಾಂ, ಕೆರೆಗಳ ಪುನಶ್ಚೇತನ ಇತರೆ 112 ಕಾಮಗಾರಿಗಳ ಅನುಷ್ಠಾನಕ್ಕೆ 1793 ಕೋಟಿ ಮೀಸಲಿಡಲು ಅನುಮೋದಿಸಲಾಗಿದೆ
ತೋಟಗಾರಿಕಾ ಇಲಾಖೆ
ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ 64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ
ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ
2026-27 ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದೊಂದಿಗೆ 100 ಹೊಸ ಪಶು ವೈದ್ಯಕೀಯ ಕಟ್ಟಡಗಳ ನಿರ್ಮಾಣ ಘೋಷಿಸಿದ್ದಾರೆ.








