ಸಂಪಾಜೆ: ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಭಾಗದ ಜನರ ಬಹು ಕಾಲದ ಬೇಡಿಕೆಯಾದ ಬಂಗ್ಲೆಗುಡ್ಡೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ನಡೆಸಲಾಗಿದೆ. ಗ್ರಾಮ ಪಂಚಾಯತ್ನ 15 ನೇ ಹಣಕಾಸು ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 4ಲಕ್ಷ 68 ಸಾವಿರ ರೂಪಾಯಿ ಮೊತ್ತದಲ್ಲಿ ರಸ್ತೆ ಕಾಮಗಾರಿ ನಡೆಸಲಾಗಿದೆ.ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಸಂಜೀವಿನಿ ಕಟ್ಟಡ ಹಾಗು ಘನ ತ್ಯಾಜ್ಯ ಘಟಕಕ್ಕೆ ಹೋಗುವ ರಸ್ತೆ ಇದಾಗಿದ್ದು ಈ ರಸ್ತೆ ತೀರಾ ಹದಗೆಟ್ಟಿತ್ತು. ಈ ಹಿನ್ನಲೆಯಲ್ಲಿ ರಸ್ತೆಯ ಕಾಂಕ್ರೀಟೀಕರಣ ನಡೆಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.