ಚಿತ್ರದುರ್ಗ: ಹಿರಿಯೂರು ಸಮೀಪ ಜವನಗೊಂಡನಹಳ್ಳಿಯ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ48ರಲ್ಲಿ ಕಂಟೈನರ್ ಹಾಗೂ ಸ್ಲೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ
ಬಸ್ನಲ್ಲಿದ್ದ ಹಲವರು ಸಜೀವವಾಗಿ ದಹನಗೊಂಡಿದ್ದಾರೆ.
15ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು. ಬೆಂಗಳೂರು ಕಡೆಗೆ ಹೊರಟಿದ್ದ ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿದೆ.ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ಕೂಡಲೇ ಹಲವು ಪ್ರಯಾಣಿಕರು ಬಸ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
















