ಸುಳ್ಯ: ವಿದ್ಯಾರ್ಥಿಗಳು ಪ್ರಯಾಣಕ್ಕಾಗಿ ಎದುರಿಸುತ್ತಿರುವ ಬಸ್ ಸಮಸ್ಯೆಯನ್ನು ಸರಿಪಡಿಸಬೇಕು, ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಒದಗಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸುಳ್ಯ ಘಟಕದ ವತಿಯಿಂದ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಜ.3ರಂದು ಪ್ರತಿಭಟನೆ ನಡೆಸಲಾಯಿತು.ತಾಲೂಕಿನ ಗ್ರಾಮೀಣ ಭಾಗಕ್ಕೆ
ಸರಿಯಾದ ಸಮಯಕ್ಕೆ ಬಸ್ಗಳಿಲ್ಲದೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲು ಪರದಾಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು. ಬಾಳುಗೋಡು, ಮಡಪ್ಪಾಡಿ, ಮರ್ಕಂಜ, ಪೇರಾಲು ಮಾರ್ಗ ಸೇರಿದಂತೆ ತಾಲೂಕಿನ ವಿವಿಧ ಮಾರ್ಗಗಳಲ್ಲಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು

ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಬೇಡಿಕೆಯನ್ನು ಮುಂದಿಟ್ಟು ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಒಂದು ವಾರದಲ್ಲಿ ಸಮಸ್ಯೆ ಸರಿಪಡಿಸದಿದ್ದರೆ ಹೋರಾಟ ಮುಂದುವರಿಸುವುದಾಗಿ ಎಬಿವಿಪಿ ಮುಖಂಡರು ತಿಳಿಸಿದರು.
ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುಳಿಯ ಸಾತ್ವಿಕ್,ಎಬಿವಿಪಿ ಪ್ರಾಂತ ವಿದ್ಯಾರ್ಥಿನಿ ಪ್ರಮುಖ್ ಅಮೃತಾಂಬ,ಎಬಿವಿಪಿ ನಗರ ಕಾರ್ಯದರ್ಶಿ ಪುನೀತ್, ಹೋರಾಟ ಪ್ರಮುಖ್ ಮನ್ವಿತ್, ಸಹ ಹೋರಾಟ ಪ್ರಮುಖ್ ಕೀರ್ತನ್,ಪ್ರಮುಖರಾದ ಪ್ರೀತೇಶ್ ಕಣೆಮರಡ್ಕ, ಶ್ರೀಶರಣ್ ಮೊಗ್ರ, ಅಮಿತ್ ನಾಯಕ್
ಮತ್ತಿತರರು ಉಪಸ್ಥಿತರಿದ್ದರು.












