ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯಕ್ಕೂ ಮುನ್ನ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರು ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ
ಬುಧವಾರ ಮುಕ್ತಾಯಗೊಂಡ ಪಂದ್ಯದ ಕೊನೆಯ ಓವರ್ ಸಂದರ್ಭದಲ್ಲಿ ಬ್ಯಾಟಿಂಗ್ ಮಾಡುವಾಗ ಭುಜದ ಗಾಯಕ್ಕೆ ಒಳಗಾಗಿದ್ದ ಅರ್ಷದೀಪ್ ಸಿಂಗ್ ಬದಲು ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಮೋಘ ಬೌಲಿಂಗ್ ದಾಳಿ ಪ್ರದರ್ಶಿಸಿದ್ದ ಭುವನೇಶ್ವರ್ ಕುಮಾರ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಟ್ರೋಫಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.2026ರ ಐಪಿಎಲ್ನಲ್ಲಿ 16 ಪಂದ್ಯಗಳಲ್ಲಿ 28 ವಿಕೆಟ್ಗಳನ್ನು ಕಬಳಿಸಿದ್ದರು. ಆ ಮೂಲಕ ಪರ್ಪಲ್ ಕ್ಯಾಪ್ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದರು.ಮುಂಬರುವ ನ್ಯೂಜಿಲೆಂಡ್ ಪ್ರವಾಸದಲ್ಲೂ ಭುವನೇಶ್ವರ್ ಕುಮಾರ್ ಅವರು ಭಾರತ ತಂಡದ ಭಾಗವಾಗಿರಲಿದ್ದಾರೆ.










