ಬೆಂಗಳೂರು: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.
ಬಾಗಲಕೋಟೆಯಿಂದ ಮೂರು ಬಾರಿ ಶಾಸಕರಾಗಿರುವ ವೀರಣ್ಣ ಚರಂತಿಮಠ ಮತ್ತು
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶ್ರೀನಿವಾಸ್ ದಾಸ ಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಉಪಚುನಾವಣೆ ಎದುರಾಗಿದೆ. ಮತ್ತೊಂದೆಡೆ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.
ಎರಡೂ ಕ್ಷೇತ್ರಗಳಿಗೂ ಏಪ್ರಿಲ್ 9ರಂದು ಮತದಾನ ನಡೆಯಿದ್ದು, ಮೇ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.










