ಬೆಂಗಳೂರು:ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನ ಯಾಸಿರ್ ಖಾನ್ ಪಠಾಣ್ ಹಾಗೂ
ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಜಯಭೇರಿ ಬಾರಿಸಿದ್ದಾರೆ.
ಸಿ.ಪಿ.ಯೋಗೇಶ್ವರ್99,320 ಮತ ಪಡೆದರೆ,
ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ 73,417 ಮತ ಪಡೆದಿದ್ದಾರೆ.ಶಿಗ್ಗಾಂವಿಯಲ್ಲಿ ಯಾಸಿರ್ ಖಾನ್ ಪಠಾಣ್ 93,234 ಮತ ಪಡೆದಿದ್ದು, ಭರತ್ ಬೊಮ್ಮಾಯಿ 79,756 ಮತ ಪಡೆದಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ನ ಅನ್ನಪೂರ್ಣ ತುಕಾರಾಂ 93,051 ಮತ ಪಡೆದಿದ್ದು,ಬಿಜೆಪಿಯ ಬಂಗಾರು ಹನುಮಂತು 83,483 ಮತ ಪಡೆದಿದ್ದಾರೆ.ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ 15ನೇ ಸುತ್ತಿನಲ್ಲಿ 25,000ಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.