ಧರ್ಮಸ್ಥಳ:ಅಡ್ಡಮತದಾನದ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ನೋವಾಗಿದೆ,ಅಡ್ಡಮತದಾನ ಮಾಡಿದವರು ಯಾರು ಎಂಬ ಸತ್ಯ ಇಂದಲ್ಲ ನಾಳೆ ಹೊರ ಬರಲಿದೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಅವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ
ನಂತರ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ನಾಲ್ಕು ದಿನಗಳಲ್ಲಿ ದೆಹಲಿಯಲ್ಲಿ
ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮಂಗಳೂರು ಮೂಲಕ ನೇರವಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ.ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ಹಿರಿಯರ ಸಲಹೆಯಂತೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಿದ್ದೇನೆ.ರಾಜ್ಯದಲ್ಲಿ ಜನರ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ.ಮುಂದೆ ಬಿ.ಜೆ.ಪಿ. ಸರ್ಕಾರ ಮತ್ತೆ ಆಡಳಿತಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮುಂದೆ ರಾಜ್ಯಾದ್ಯಂತ ಪ್ರವಾಸ ಮಾಡಿ ತಾನು ಬಿ.ಜೆ.ಪಿ. ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಮಾಡುವುದಾಗಿ ತಿಳಿಸಿದರು.ರಾಜ್ಯದಲ್ಲಿ ಭೀಕರ ಬರಗಾಲದ ಸನ್ನಿವೇಶವಿದ್ದು ಇದೆಲ್ಲ ನಿವಾರಣೆಯಾಗಿ ಒಳ್ಳೆಯ ಮಳೆ-ಬೆಳೆ ಆಗಲಿ. ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲಿ. ಜನರ ಬದುಕು ಹಸನಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.
ಸಂಸರದ ಬ್ರಿಜೇಶ್ ಚೌಟ, ಬಿ.ಜೆ.ಪಿ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಗುರುರಾಜ ಗಂಟಿಹೊಳೆ, ಯಶಪಾಲ್ ಸುವರ್ಣ, ರಾಜೇಶ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಕೆ. ಪ್ರತಾಪಸಿಂಹನಾಯಕ್, ಕಿಶೋರ್ ಕುಮಾರ್ ಮತ್ತು ಪಕ್ಷದ ಕಾರ್ಯಕರ್ತರಾದ ಜಯಂತ್ ಕೋಟ್ಯಾನ್ ಹಾಗೂ ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು.






