ಬೆಂಗಳೂರು:ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಸ್ಪರ್ಧಿಸಲಿದ್ದಾರೆ. ಈ ಉಪಚುನಾವಣೆ
ಏಪ್ರಿಲ್ 9 ರಂದು ನಡೆಯಲಿದೆ.ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮೊಗ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ಹಿರಿಯ ನಾಯಕ ಎಚ್.ವೈ.ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಎ.9 ರಂದು ಉಪಚುನಾವಣೆ ನಡೆಯಲಿದೆ.














