ಸುಳ್ಯ: ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ವಿಕ್ರಂ.ಎ.ವಿ. ಅಡ್ಪಂಗಾಯ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ನಡುಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿಎ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿದಿತ್ತು. ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯಲ್ಲಿ

ವಿಕ್ರಮ್ ಅಡ್ಪಂಗಾಯ

ಚಂದ್ರಶೇಖರ ನಡುಮನೆ
ಅಧ್ಯಕ್ಷ ಸ್ಥಾನಕ್ಕೆ ವಿಕ್ರಂ.ಎ.ವಿ ಅವರನ್ನು ಬಾಲಗೋಪಾಲ ಸೇರ್ಕಜೆ ಸೂಚಿಸಿದರು.ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಚಂದ್ರಶೇಖರ ನಡುಮನೆ ಅವರ ಹೆಸರನ್ನು ನಿರ್ದೇಶಕ ಕೇಶವ ಸಿಎ ಸೂಚಿಸಿದರು.
ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಬಿಜೆಪಿ ಮುಖಂಡ ಎನ್.ಎ.ರಾಮಚಂದ್ರ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಅಧ್ಯಕ್ಷ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ನಿರ್ದೆಶಕ ಸ್ಥಾನಕ್ಕೆ ರಾಜಿನಾಮೆ ಘೋಷಿಸಿರುವ ಅವರು ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದರು.
ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಎ.ಎಸ್.ವಿಜಯಕುಮಾರ್ ಅವರ ಪುತ್ರರಾದ ವಿಕ್ರಂ ಎ.ವಿ. ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಹಾಗೂ ವಕೀಲರಾದ ಚಂದ್ರಶೇಖರ ನಡುಮನೆ ಸಾಲಗಾರರಲ್ಲದ ಕ್ಷೇತ್ರದಿಂದ ಪ್ರಥಮ ಬಾರಿಗೆ ಸಿಎ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.
‘ಯುವಕರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ವಿಕ್ರಮ್ ಹಾಗೂ ಚಂದ್ರಶೇಖರ ನಡುಮನೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ‘ಸುಳ್ಯ ಮಿರರ್’ಗೆ ತಿಳಿಸಿದ್ದಾರೆ.









