ಸುಳ್ಯ: ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಬಿಜೆಪಿ ಮುಖಂಡ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಅವರಿಗೆ ಅಧ್ಯಕ್ಷ ಸ್ಥಾನ ಕೈ ತಪ್ಪಿರುವ ಹಿನ್ನಲೆಯಲ್ಲಿ ಸಿಎ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ. ಸಿಎ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ ಎಂದು
ಎನ್.ಎ.ರಾಮಚಂದ್ರ ‘ಸುಳ್ಯ ಮಿರರ್’ ಗೆ ತಿಳಿಸಿದ್ದಾರೆ.
ಸಿಎ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿದಿತ್ತು. ಇಂದು ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಚರ್ಚೆ ನಡೆಸಿ ಅಧ್ಯಕ್ಷ ಸ್ಥಾನಕ್ಕೆ ವಿಕ್ರಂ.ಎ.ವಿ ಅವರನ್ನು ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಎನ್.ಎ.ರಾಮಚಂದ್ರ ಅವರು ಸಿಎ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.









