ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಲು ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರದಿಂದ ಈ ಅಧಿಸೂಚನೆ ಹೊರಬಿದ್ದಿದೆ. ಸಿಎಎ ನಿಯಮಗಳ ಅಧಿಸೂಚನೆ ಹೊರಡಿಸಿದ ಬಳಿಕ ಕೇಂದ್ರದ ಮೋದಿ ಸರ್ಕಾರವು 2014ರ ಡಿ.31ರ ವರೆಗೆ ಭಾರತಕ್ಕೆ
ವಲಸೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದ ಹಿಂದೂ, ಸಿಖ್, ಜೈನ, ಬುದ್ಧ, ಪಾರ್ಸಿ ಹಾಗೂ ಕ್ರೈಸ್ತರಿಗೆ ದೇಶದ ಪೌರತ್ವ ನೀಡಲಿದೆ.2019ರಲ್ಲಿ ಅಂಗೀಕಾರಗೊಂಡಿದ್ದ ಈ ಕಾನೂನಿಗೆ ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಆದರೆ ಜಾರಿಗೆ ಅಧಿಸೂಚನೆ ಹೊರಡಿಸಿರಲಿಲ್ಲ. ಪೌರತ್ವ ಬಯಸಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಗೃಹ ಸಚಿವಾಲಯವು ಇದಕ್ಕೆ ಪೋರ್ಟಲ್ ಕೂಡ ರಚಿಸಿದೆ.









