ಬೆಂಗಳೂರು:ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ರಾಜಭವನದಲ್ಲಿ ನಡೆಯಲಿದೆ.ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ನೂತನ ಸಚಿವರಾಗಿ
ಪಿ. ಎಂ. ನರೇಂದ್ರಸ್ವಾಮಿ,ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ
ಕೆ. ಎಸ್. ಬಸವಂತಪ್ಪ, ಬಿ. ನಾಗೇಂದ್ರ,ಟಿ.ರಘುಮೂರ್ತಿ
ಬಿ. ಜೆಡ್. ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್,ಮಧು ಬಂಗಾರಪ್ಪ,ಪುಟ್ಟರಂಗಶೆಟ್ಟಿ, ಎಸ್.ಎಸ್.ಮಲ್ಲಿಕಾರ್ಜುನ್, ಡಾ. ಅಜಯ್ ಸಿಂಗ್,ಎನ್. ಚಲುವರಾಯಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಎಚ್. ಸಿ. ಬಾಲಕೃಷ್ಣ,ಗಾಯತ್ರಿ ಶಾಂತೇಗೌಡ,ಬಸವರಾಜ ರಾಯರೆಡ್ಡಿ,ವಿಜಯಾನಂದ ಕಾಶಪ್ಪನವರ್, ಲಕ್ಷ್ಮಣ ಸವದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ ಅವರ ಹೆಸರನ್ನು ಅಖೈರುಗೊಳಿಸಲಾಗಿದೆ. ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಹೆಸರು ಅಂತಿಮವಾಗಿದೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಹಾಗೂ ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ಹೈಕಮಾಂಡ್ ಅಂತಿಮಗೊಳಿಸಿದೆ.












