ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಹಾಗೂ 8ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಳಿಕ ವಿಧಾನಸೌಧಕ್ಕೆ ಆಗಮಿಸಿದ ನೂತನ ಸಿಎಂ, ಡಿಸಿಎಂ ಹಾಗೂ ಸಚಿವರು ಸಚಿವ ಸಂಪುಟ ಸಭೆ ಆರಂಭಿಸಿದ್ದಾರೆ. ಈ ಹಿಂದೆ ಚುನಾವಣೆ
ಸಮಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಹೊರತರುವುದಾಗಿ ಆಶ್ವಾಸನೆ ನೀಡಿದ್ದರು. ಆ ನಿಟ್ಟಿನ್ಲಲಿ ಸಭೆ ಮಾಡಲಾಗುತ್ತಿದೆ. ಪ್ರಮಾಣ ವಚನದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ನಾವು ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡುತ್ತೇವೆ ಘೋಷಿಸಿದರು. ಕಂಠೀರವ ಮೈದಾನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಐದು ಯೋಜನೆಗಳಿಗೆ ಅನುಮತಿ ನೀಡಿ ಜಾರಿಗೆ ತರುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.