ಮಂಗಳೂರು: ಕರ್ನಾಟಕದಲ್ಲಿ ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾಡಲು ತೀರ್ಮಾನ ಮಾಡಲಾಗಿದೆ. ಈ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಈ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಹೊರಹೊಮ್ಮಲಿದೆ.ಕರ್ನಾಟಕ ರಾಜ್ಯದಲ್ಲಿ
ಉಡುಪಿ, ದಶ್ರಿಣ ಕನ್ನಡ ಭಾಗದಲ್ಲಿ ತುಳು ಭಾಷೆಗೆ ಸ್ಥಾನ ಮಾನ ಘೋಷಣೆ ಹಿಂದೆಯೇ ಆಗಬೇಕಿತ್ತು. ಆದರೆ ಹಿಂದಿನವರು ಯಾಕೆ ಮಾಡಲಿಲ್ಲ, ಏನಾಯಿತು ಎಂದು ನಾವು ಕೇಳುವುದಿಲ್ಲ. ನಾವು ಬದುಕಿನ ಮೇಲೆ ರಾಜಕಾರಣ ಮಾಡಬೇಕು, ಭಾವನೆ ಮೇಲೆ ಅಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರಲ್ಲಿ ಸಂಪುಟ ಸಭೆ ಮಾಡುತ್ತೇವೆ. ಈ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಮಾತ್ರವಲ್ಲ, ಸಮಗ್ರ ಕರ್ನಾಟಕ ಅಭಿವೃದ್ಧಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರಾವಳಿ ಪ್ರವಾಸೋದ್ಯಮ ಸೇರಿದಂತೆ ಸಮಗ್ರ ಅಭಿವದ್ಧಿ ಮಾಡಲಾಗುತ್ತಿದೆ. ಮೆಲೆನಾಡು ಮತ್ತು ಕರಾವಳಿ ಒಳಗೊಂಡಂತೆ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಂದರುಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದ್ದಾರೆ.








