ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನಲ್ಲಿ ಸುದರ್ಶನ ಕೇಬಲ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಭಾರತದ
ಅತಿ ಉದ್ದದ ಕೇಬಲ್ ಸೇತುವೆ 2.5 ಕಿ.ಮೀ ಉದ್ದದ ಸುದರ್ಶನ ಸೇತುವೆಯನ್ನು ಲೋಕಾರ್ಪಣೆ ಮಾಡಿದರು. 979 ಕೋಟಿ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದೆ. ಇದನ್ನು ಓಖಾ-ಬೆಟ್ ದ್ವಾರಕಾ ಸಿಗ್ನೇಚರ್ ಸೇತುವೆ ಎಂದೂ ಕರೆಯಲಾಗುತ್ತದೆ.
ಸುದರ್ಶನ ಸೇತುವೆಯು ಓಖಾ ಮುಖ್ಯ ಭೂಭಾಗವನ್ನು ಬೆಟ್ ದ್ವಾರಕಾ ದ್ವೀಪಕ್ಕೆ ಸಂಪರ್ಕ ಕಲ್ಪಿಸುತ್ತದೆ. ಗುಜರಾತ್ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ.









